ನಮ್ಮಲ್ಲಿ ಮಾತ್ರ ಸರ್ಕಾರದಿಂದ ದಸರಾ ಆಚರಣೆ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ ಇನ್ನೂ ಚೆನ್ನಾಗಿ ದಸರಾ ಹಬ್ಬ ಆಚರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಮುಂದಿನ ವರ್ಷವೂ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುತ್ತಾರೆ. ಅವರ ನೇತೃತ್ವದಲ್ಲಿ ಇನ್ನೂ ಚೆನ್ನಾಗಿ ದಸರಾ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇಂದಿನ ಜಂಬೂಸವಾರಿಗೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರಾತ್ರಿ 11 ಗಂಟೆಯವರೆಗೆ ಮಳೆ ಬೇಡವೆಂದು ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.