ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ.
ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 30ರಿಂದ ಜುಲೈ 3ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಇನ್ನು 2 ದಿನಗಳ ಕಾಲ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.