ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರ್ನಾಲ್ಕು ದಿನಗಳವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಪ್ರಭಾವ ಹೆಚ್ಚಾಗಿರಲಿದೆ ಎಂದು ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ ತೀವ್ರವಾಗಲಿದ್ದು, ಇನ್ನೆರಡು ದಿನಗಳಲ್ಲಿ ಉತ್ತರ ಹಾಗೂ ನೈಋತ್ಯ ಭಾಗದೆಡೆಗೆ ಮಾರುತಗಳು ಚಲಿಸಲಿವೆ ಎಂದು ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ಸೋಮವಾರದಿಂದ ಮಹಾರಾಷ್ಟ್ರ, ಕೊಂಕಣ ಒಳಗೊಂಡಂತೆ ಹಲವೆಡೆ ಹೆಚ್ಚಿನ ಮಳೆ ಆರಂಭವಾಗುವುದು ಎಂದು ತಿಳಿಸಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಹಾರ, ದೆಹಲಿ, ಒಡಿಶಾ ಹಾಗೂ ಮಹಾರಾಷ್ಟ್ರದಲ್ಲಿ ಈಗಾಗಲೇ ಅಧಿಕ ಮಳೆ ದಾಖಲಾಗಿದೆ. ಮುಂದೆ ಓದಿ..
ವಾಯುಭಾರ ಕುಸಿತದಿಂದಾಗಿ ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿದ್ದು, ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರಾ, ಕೊಲ್ಲಾಪುರಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಬೈ, ಥಾಣೆ, ವಾರ್ಧಾ, ಪಾಲ್ಗಾರ್, ಸಿಂಧುದುರ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೂ ಈ ಪ್ರದೇಶಗಳಲ್ಲಿ ಅಧಿಕ ಮಳೆ ಮುಂದುವರೆಯುವುದಾಗಿ ತಿಳಿಸಿದೆ