ಮುಂದಿನ 4 ದಿನ ರಾಜ್ಯದ ಈ ಊರುಗಳಲ್ಲಿ ಭಾರೀ ಮಳೆ

0
41

ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ ಪ್ರವೇಶಿಸಲಿದೆ. ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಅಕ್ಟೋಬರ್ 4 ತನಕ ಮಳೆಯಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಶುಕ್ರವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಶಾಹೀನ್ ಚಂಡಮಾರುತ ಶುಕ್ರವಾರ ಗುಜರಾತ್ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ. ಇದರ ಪರಿಣಾಮ ಮಳೆಯಾಗಲಿದ್ದು, ಕೊಡಗು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆ ಸುರಿಯುವ ಸಾಧ್ಯತೆ ಇದೆ.

 

 

 

LEAVE A REPLY

Please enter your comment!
Please enter your name here