ದೇಶದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ ಹಾಗೂ ವಿದರ್ಭಾದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಶಾನ್ಯ ಭಾರತದಲ್ಲಿ ಇನ್ನೂ ಕೆಲವು ದಿನ ಮಳೆಯಾಗಲಿದೆ. ಹಿಮಾಲಯ, ಪಶ್ಚಿಮ ಬಂಗಾಳ ಹಾಗೂ ಸಿಕ್ಕಿಂನಲ್ಲಿ ನಾಲ್ಕೈದು ದಿನಗಳ ಕಾಲ ಅಧಿಕ ಪ್ರಮಾಣದ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಅಸ್ಸಾಂ ಹಾಗೂ ಮೇಘಾಲಯದಲ್ಲಿ ಆಗಸ್ಟ್ 16 ಹಾಗೂ 17ರಂದು ಅಧಿಕ ಮಳೆಯಾಗಲಿದೆ. ಅರುಣಾಚಲ ಪ್ರದೇಶದಲ್ಲಿ ಆಗಸ್ಟ್ 17ರಂದು ಹಾಗೂ ನಾಗಾಲ್ಯಾಂಡ್, ಮಣಿಪುರ, ಮಿಝೋರಾಂ ಹಾಗೂ ತ್ರಿಪುರಾದಲ್ಲಿ ಆಗಸ್ಟ್ 16ರಂದು ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮಳೆ ಇನ್ನೆರಡು ದಿನ ಮುಂದುವರೆಯುವುದಾಗಿ ತಿಳಿಸಿದೆ.
ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಜಾರ್ಖಂಡ್, ಆಂಧ್ರದ ಕರಾವಳಿ ಪ್ರದೇಶಗಳು, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಡ ಹಾಗೂ ವಿದರ್ಭಾದಲ್ಲಿ ಮುಂದಿನ ಐದು ದಿನಗಳವರೆಗೂ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ರವಾನಿಸಿದೆ.