ಮುಂದಿನ 9 ದಿನಗಳ ಕಾಲ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Date:

ಶನಿವಾರದಿಂದ ಆರಂಭಗೊಂಡು ಸೆಪ್ಟೆಂಬರ್ 13ರವರೆಗೂ ಬೆಸ್ಕಾಂ ನೆಲದಡಿ ಕೇಬಲ್ ಕಾಮಗಾರಿ ಕೈಗೊಂಡಿರುವುದರಿಂದ ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ.

ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ. ಬೆಳಿಗ್ಗೆ 10ರಿಂದ ಸಂಜೆ 5ರ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬಾಪೂಜಿನಗರ, ಪಂತರಪಾಳ್ಯ, ಇಂಡಸ್ಟ್ರಿಯಲ್ ಟೌನ್, ಸಿದ್ದಿವಿನಾಯಕ ಲೇಔಟ್, ಐಟಿಐ ಲೇಔಟ್, ಕಾಮಾಕ್ಷಿಪಾಳ್ಯ ಕೈಗಾರಿಕಾ ಪ್ರದೇಶ, ಕೆಎಸ್‌ಜಿ ಎಸ್ಟೇಟ್, ಪೇಟೆ ಚೆನ್ನಪ್ಪ ಕೈಗಾರಿಕಾ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವುದಾಗಿ ತಿಳಿದುಬಂದಿದೆ.

 

ಬ್ಯಾಡರಹಳ್ಳಿ, ಅಂಜನಾ ನಗರ, ಬಿಇಎಲ್ ಲೇಔಟ್, ಗಿಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಎ 8 ಹಾಗೂ 9ನೇ ಹಂತ, ರೈಲ್ವೆ ಲೇಔಟ್, ಉಪಕಾರ್ ಲೇಔಟ್‌, ಗೊಲ್ಲರಹಟ್ಟಿ, ಮಾಡರ್ನ್ ಲೇಔಟ್, ಕೆಬ್ಬೆಹಳ್ಳ, ಶ್ರೀನಿವಾಸನಗರ, ಹೆಗ್ಗನಹಳ್ಳಿ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುವುದು.

ವಸಂತ ವಲ್ಲಭ ನಗರ, ಶಾರದ ನಗರ, ಮಾರುತಿ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಟೀಚರ್ಸ್‌ ಕಾಲೋನಿ, ಜರಗನಹಳ್ಳಿ, ಎಂಎಸ್ ಲೇಔಟ್, ರಾಜಮ್ಮ ಗಾರ್ಡೆನ್, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಜೆಪಿ ನಗರ 2ನೇ ಹಂತ, ಕತ್ತರಿಗುಪ್ಪೆ, ಬನಶಂಕರಿ ಮೂರನೇ ಹಂತ.

ಲಾಲ್‌ಬಾಗ್ ರಸ್ತೆ, ಬಚ್ಚೇಗೌಡ್ ಕಾಂಪೌಂಡ್, ನಂದಿನಿ ಅಪಾರ್ಟ್‌ಮೆಂಟ್,ಲಕ್ಷ್ಮಿ ರಸ್ತೆ, ಕುಮಾರಸ್ವಾಮಿ ನಗರ, ವಿಠ್ಠಲ್ ನಗರ, ತ್ಯಾಗರಾಜನಗರ, ಬಿಬಿಎಂಪಿ ಸ್ವಿಮ್ಮಿಂಗ್ ಪೂಲ್, ಜೆಸಿ ರಸ್ತೆ, ಕುವೆಂಪು ನಗರ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುವುದು ಎಂದು ಬೆಸ್ಕಾಂ ಮಾಹಿತಿ ನೀಡಿದೆ.

 

 

Share post:

Subscribe

spot_imgspot_img

Popular

More like this
Related

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...