ಮಹಾರಾಷ್ಟ್ರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಹಾರಾಷ್ಟ್ರ ಸರ್ಕಾರ ಮುಜುಗರ ಉಂಟು ಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಆಪ್ತರಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮುಂಬೈನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಹೋಟೆಲ್ ಒಳಗೂ ಸೇರಿಸಲ್ಲ. ಜೊತೆಗೆ ಅತೃಪ್ತ ಶಾಸಕರು ಮುಂಬೈ ಪೊಲೀಸ್ ಆಯುಕ್ತರಿಗೆ ಭದ್ರತೆ ನೀಡಿ ಎಂದು ಮನವಿ ಮಾಡಿದ್ದಾರೆ. ಇದೆಲ್ಲದರಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾಗುತ್ತದೆ. ಹೀಗಿರುವಾಗ ಕೇವಲ ಮುಖ್ಯಮಂತ್ರಿಯ ಗಮನಕ್ಕೆ ತಂದು ಪಕ್ಷದ ನಾಯಕರಿಗೂ ಹೇಳದೇ ಹೋಗಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.






