ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿರುವ ಆಟಗಾರ ಯಾರು ಗೊತ್ತಾ?

Date:

 

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸೆಣಸಾಡಿದವು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್‌ಗಳ ಸಾಧಾರಣ ಮೊತ್ತವನ್ನು ದಾಖಲಿಸಿತು. 138 ರನ್‌ಗಳ ಸುಲಭ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಧಾನಗತಿಯ ಬ್ಯಾಟಿಂಗ್ ನಡೆಸಿ 5 ಬಾಲ್ ಬಾಕಿ ಇರುವಾಗ ಜಯ ಸಾಧಿಸಿತು. 19.1 ಓವರ್‌ಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ 4 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿತು.

 

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಶಿಖರ್ ಧವನ್ ಜವಾಬ್ದಾರಿಯುತ ಆಟವನ್ನಾಡಿದರು. 42 ಎಸೆತಗಳಲ್ಲಿ 45 ರನ್ ಬಾರಿಸಿದ ಧವನ್ ಅರ್ಧಶತಕ ವಂಚಿತರಾದರು. ಆದರೆ ಈ ಇನ್ನಿಂಗ್ಸ್ ಮೂಲಕ ಶಿಖರ್ ಧವನ್ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎಬಿ ಡಿವಿಲಿಯರ್ಸ್ ಅವರನ್ನು ಹಿಂದಿಕ್ಕಿದ್ದಾರೆ. ಹೌದು ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಐಪಿಎಲ್ ಇತಿಹಾಸದಲ್ಲಿ ಶಿಖರ್ ಧವನ್ 793 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

 

 

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಅತಿ ಹೆಚ್ಚು ರನ್ ಬಾರಿಸಿರುವ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಸುರೇಶ್ ರೈನಾ 818 ರನ್ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. 793 ರನ್‌ಗಳನ್ನು ಬಾರಿಸಿರುವ ಧವನ್ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, 774 ರನ್ ಗಳಿಸಿರುವ ಎಬಿ ಡಿವಿಲಿಯರ್ಸ್ ಮೂರನೇ ಸ್ಥಾನದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...