ಮುಂಬೈ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ಪತನ, ಮೂವರು ಆಸ್ಪತ್ರೆಗೆ ದಾಖಲು

0
282

ಮುಂಬೈ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಯ ನಡುವೆ ಖಾಸಗಿ ವಿಮಾನವೊಂದು ಲ್ಯಾಂಡ್ ಆಗಲು ಯತ್ನಿಸುತ್ತಿದ್ದಾಗ ಪತನಗೊಂಡಿದೆ.

ವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸೇರಿ 8 ಮಂದಿ ಇದ್ದರು. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತುರ್ತು ಸೇವೆಗಳು ತಿಳಿಸಿವೆ. ಅವರಿಗೆ ಯಾವ ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಬಗ್ಗೆ ತಿಳಿದಿಲ್ಲ.

ಯಾವುದೇ ಪ್ರಾಣಹಾನಿಯಾಗಿಲ್ಲ
ಅವಘಡದಿಂದ ರನ್ವೇಯಲ್ಲಿ ಉಂಟಾಗಿದ್ದ ಅವಶೇಷಗಳನ್ನು ತೆರವುಗೊಳಿಸಲಾಗಿದೆ. ಕಾರ್ಯಾಚರಣೆ ಪುನರಾರಂಭಿಸಲಾಗಿದೆ. ಮಳೆಯಿಂದಾಗಿ ಜಾರುವಂತಾಗಿದ್ದ ರನ್ವೇ 27ರ ಬಳಿ ಈ ಘಟನೆ ನಡೆದಿದೆ. ವಿಮಾನವು ನೆಲಕ್ಕೆ ಅಪ್ಪಳಿಸುತ್ತಿರುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.