ಮುಂಬೈ ವಿರುದ್ಧದ ಮ್ಯಾಚ್ ಗೆ ನಮ್ಮ RCB 11!

Date:

ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ಬ್ಯಾಟ್ಸ್‌ಮನ್‌ ಆಕಾಶ್ ಚೋಪ್ರಾ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 14ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪ್ಲೇಯಿಂಗ್ XI ಪ್ರಕಟಿಸಿದ್ದಾರೆ. ಐಪಿಎಲ್ ಆರಂಭಿಕ ಪಂದ್ಯದಲ್ಲೇ ಆರ್‌ಸಿಬಿ ಆಡಲಿದೆ.

ಏಪ್ರಿಲ್ 9ರಿಂದ ಮೇ 30ರ ವರೆಗೆ ಐಪಿಎಲ್ 2021ರ ಆವೃತ್ತಿ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಾಡಲಿವೆ. ಬಲಿಷ್ಠ ಮುಂಬೈ ಎದುರು ಆರ್‌ಸಿಬಿ ಆಡುವ ತಂಡವೂ ಬಲಿಷ್ಠವಾಗಿರೋದು ಅಗತ್ಯ. ಹೀಗಾಗಿಯೇ ಚೋಪ್ರಾ ಮುಂಬೈಗೆ ಪ್ರತಿಸ್ಪರ್ಧಿ ಆರ್‌ಸಿಬಿ ತಂಡವನ್ನು ಹೆಕ್ಕಿದ್ದಾರೆ.

ಚೋಪ್ರಾ ನೆಚ್ಚಿನ ಆರ್‌ಸಿಬಿ ತಂಡದಲ್ಲಿ ಆರಂಭಿಕರಾಗಿ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಹೆಸರಿಸಲ್ಪಟ್ಟಿದ್ದಾರೆ. ಅನ್‌ಕ್ಯಾಪ್ಡ್ ಯುವ ಬ್ಯಾಟ್ಸ್‌ಮನ್‌ ರಜತ್ ಪಾಟಿದಾರ್ 3ನೆ ಕ್ರಮಾಂಕದಲ್ಲಿದ್ದಾರೆ. ಎಬಿ ಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಕ್ರಿಸ್ಚಿಯನ್ ಮಧ್ಯಮ ಕ್ರಮಾಂಕದಲ್ಲಿದ್ದಾರೆ.

ಮುಂಬೈ ವಿರುದ್ಧದ ಮೊದಲನೇ ಪಂದ್ಯಕ್ಕೆ ಚೋಪ್ರಾ ನೆಚ್ಚಿನ ಆರ್‌ಸಿಬಿ ತಂಡದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಎಬಿ ಡಿವಿಲಿಯರ್ಸ್, ಗ್ಲೆನ್ ಮ್ಯಾಕ್ಸ್ ವೆಲ್, ಡೇನಿಯಲ್ ಕ್ರಿಶ್ಚಿಯನ್, ವಾಷಿಂಗ್ಟನ್ ಸುಂದರ್, ಕೈಲ್ ಜೇಮಿಸನ್, ಯುಜುವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...