ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಮಟ್ಟದ ಅಲ್ಲೋಲ ಕಲ್ಲೋವವಾಗಿದೆ. ಈ ಸಮಯದಲ್ಲಿ ಸಿಎಂ ಅಧಿಕಾರದಲ್ಲಿ ಮುಂದುವರೆಯುವುದು ಸರಿಯಲ್ಲ, ಈ ಅಭಿಪ್ರಾಯ ಅವರಿಂದಲೇ ಬರಬೇಕು ಎಂದರು.
ಮುಖ್ಯಮಂತ್ರಿಗಳ ಮೇಲೆ ನಂಬಿಕೆ ಇಲ್ಲ ಎನ್ನುವುದು ಇಡೀ ಜಗತ್ತಿಗೆ ಗೊತ್ತಾಗಿದೆ. ಇನ್ನೂ ವಿಶ್ವಾಸ ಮತ ಮಾಡುವುದರಲ್ಲಿ ಅರ್ಥ ಏನಿದೆ..? ಕಾಲ ದೂಡು ಸಿಎಂ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.