ಹೈದರಾಬಾದ್: ಇಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಹಾಗೂ ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೆಸರಪಲ್ಲಿ ಐಟಿ ಪಾರ್ಕ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಪ್ರಮಾಣವಚನ ಬೋಧಿಸಿದರು. ಒಟ್ಟು 23 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಟ ರಜನಿಕಾಂತ್, ಪವನ್ ಕಲ್ಯಾಣ್ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್‌ಡಿಎ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ
Date: