ಯಶವಂತರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಟಿ ಸೋಮಶೇಖರ್ ಅವರು ಮೊದಲು ಕಾಂಗ್ರೆಸ್ನಲ್ಲಿದ್ದರು ಇದೀಗ ಬಿಜೆಪಿಗೆ ಬಂದಿದ್ದಾರೆ ಬಿಜೆಪಿಯಿಂದ ಸ್ಪರ್ಧಿಸಿ ಇದ್ದರೆ ಕೂಡಾ ಪ್ರ ಪ್ರಚಾರದ ಸಂದರ್ಭದ ವೇಳೆ ಎಸ್ ಟಿ ಸೋಮಶೇಖರ್ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಬೆಳಗಿನ ಜಾವ ಐದು ಗಂಟೆಯ ಸುಮಾರಿಗೆ ಮುಖ್ಯಮಂತ್ರಿ ಕನಸು ಬಿದ್ದಿರಬೇಕು. ಹೀಗಾಗಿ ಅವರು ಹೋದಲ್ಲಿ-ಬಂದಲ್ಲಿ ನಾನೇ ಸಿಎಂ ಎಂದು ತಿರುಗಾಡುತ್ತಿದ್ದಾರೆಂದು ಟೀಕಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಆಗಲೇ ಬಿಜೆಪಿಯನ್ನು ಮಣಿಸಲು ಸಾಧ್ಯವಾಗಲಿಲ್ಲ. ಈಗ ಕೇವಲ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಅಭ್ಯರ್ಥಿಯನ್ನು ಹರಕೆ ಕುರಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.