ಮುಜರಾಯಿ ಇಲಾಖೆ ಅರ್ಚಕರಿಗೆ ಸರ್ಕಾರದಿಂದ ದಸರಾಗೆ ದೊಡ್ಡ ಗಿಫ್ಟ್

Date:

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “”ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ವಿಮಾ ಯೋಜನೆ ಜಾರಿಗೆ ತರಲಾಗಿದೆ. ಅರ್ಚಕರ ಆರೋಗ್ಯ ರಕ್ಷಣೆಗೆ ವಿನೂತನ ವಿಮಾ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇವೆ. ಅದರಿಂದ ಮುಜರಾಯಿ ಇಲಾಖೆಯ ಸುಮಾರು 37 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಲಿದೆ,” ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

“ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇ ವೇತನ ಆಯೋಗದ ಒದಗಿಸುವ ಬೇಡಿಕೆ ಇತ್ತು. ಅದರಂತೆ ಅರ್ಚಕರ ಬಹಳ ದಿನಗಳ ಬೇಡಿಕೆಯನ್ನು ಒದಗಿಸಲಾಗಿದೆ. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದಂತೆ ವೇತನ ದೊರೆಯುವಂತೆ ಮಾಡಿದ್ದೇವೆ.” ಎಂದು ಇದೇ ವೇಳೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...