ಮುಡಾ ಅಕ್ರಮದ ತನಿಖೆ ಸಿಬಿಐಗೆ ವಹಿಸುವ ಧೈರ್ಯ ನಿಮಗಿದೆಯಾ.?: ಶೆಟ್ಟರ್ ಪ್ರಶ್ನೆ

Date:

ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಹಗರಣದಲ್ಲಿ ಬಿ.ನಾಗೇಂದ್ರ ರಾಜೀನಾಮೆ ಕೊಟ್ಟರು. ಮುಡಾ ಅವ್ಯವಹಾರದಲ್ಲಿ ಸಿದ್ದರಾಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಅದು ಹಿಂದಿನ ಸರ್ಕಾರದ ಅವಧಿಯಲ್ಲಿ ಸೈಟ್ ಹಂಚಿಕೆಯಾಗಿತ್ತು ಅಂತಾರೆ. ಇವರು ಅಧಿಕಾರಕ್ಕೆ ಬಂದು 1 ವರ್ಷವಾದರೂ ಯಾಕೆ ತನಿಖೆ ಮಾಡಿಲ್ಲ? ಬಿಜೆಪಿ ಅವಧಿಯಲ್ಲಿ ತಪ್ಪಾಗಿದ್ದರೆ ಎಸ್ಐಟಿ ಅಥವಾ ಸಿಬಿಐ ತನಿಖೆಗೆ ವಹಿಸಿ. ಮುಡಾ ಅಕ್ರಮದ ತನಿಖೆ ಸಿಬಿಐಗೆ ವಹಿಸುವ ಧೈರ್ಯ ನಿಮಗಿದೆಯಾ ಎಂದು ಪ್ರಶ್ನಿಸಿದ್ದಾರೆ.
ಅರ್ಕಾವತಿ ಡಿನೋಟಿಫೈ ಪ್ರಕರಣ ಸಿಬಿಐಗೆ ಕೊಡಿ ಅಂದ್ರೂ ಕೊಡಲಿಲ್ಲ. ನಾನು ಸಾಕ್ಷ್ಯಧಾರ ನೀಡಿದ ಮೇಲೆ ಕೆಂಪಣ್ಣ ಆಯೋಗ ರಚಿಸಿ ತನಿಖೆ ಮಾಡಿ ರಿಪೋರ್ಟ್ ನೀಡಿದ್ದರು. ಆದರೆ ಕೆಂಪಣ್ಣ ಆಯೋಗದ ವರದಿಯನ್ನು ಸಿದ್ದರಾಮಯ್ಯ ಸದನಕ್ಕೆ ನೀಡಲಿಲ್ಲ. ನೀವು ತಪ್ಪಿತಸ್ಥರಾಗಿರುವ ಕಾರಣ ಸದನದಲ್ಲಿ ವರದಿ ಮಂಡನೆ ಮಾಡಿಲ್ಲ. ಜನರ ಗಮನ ಬೇರೆಡೆ ಸೆಳೆಯಲು ಖಾಸಗಿ ವಲಯದಲ್ಲಿ ಮೀಸಲಾತಿ ವಿಚಾರ ಹರಿಬಿಟ್ಟರು. ಸಿಎಂ ಸಿದ್ದರಾಮಯ್ಯನವರದು ವಿತಂಡವಾದ ಎಂದು ವಾಗ್ದಾಳಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....