ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ಸರ್ಕಾರಕ್ಕೆ ತೀವ್ರ ಕಳಂಕ ತಂದಿದೆ..ಇದರ ಜೊತೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪವೂ ಕೇಳಿ ಬಂದಿದೆ. ಆದ್ದರಿಂದ ಮುಡಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಸರ್ಕಾರ ಆಯೋಗ ರಚಿಸಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.
ಮುಡಾ ಸೈಟ್ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಮುಡಾ ಅಕ್ರಮ ಆರೋಪ ಪ್ರಕರಣ: ನಿವೃತ್ತ ನ್ಯಾ ಪಿಎನ್ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ
Date: