ಮುಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ರಿಲೀಫ್: ಸ್ನೇಹಮಯಿ ಕೃಷ್ಣಗೆ ನೋಟಿಸ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. 50-50 ಅನುಪಾತದಡಿ ಸರಿಯಾಗಿ ಹಂಚಿಕೆ ಮಾಡದೆ ಬೇಕಾಬಿಟ್ಟಿ ಹಂಚಿಕೆ ಮಾಡಲಾಗಿದ್ದು ಅಂದಾಜು 5 ಸಾವಿರ ಕೋಟಿಯಷ್ಟು ಭಾರೀ ಅಕ್ರಮ ನಡೆದಿದೆ ಎನ್ನುವ ಆರೋಪಗಳು ಸಿಎಂ ಸಿದ್ದರಾಮಯ್ಯ ಹಾಗು ಕುಟುಂಬದ ಮೇಲೆ ಕೇಳಿಬಂದಿದ್ದವು.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಇತರರ ವಿರುದ್ಧ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಈ ಸಂಬಂಧ ಲೋಕಾಯುಕ್ತ ಪೊಲೀಸರು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್ ನೀಡಿದ್ದು, ಅದರಲ್ಲಿ ಸಾಕ್ಷ್ಯಾಧಾರ ಗಳ ಕೊರತೆ ಇದೆ ಎಂದು ಹೇಳಿದ್ದು, ಎಲ್ಲ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ ಎಂದು ತಿಳಿಸಿದೆ.
ಲೋಕಾಯುಕ್ತ ಎಸ್ಪಿ ಉದೇಶ್ ಅವರು, ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ಇದರಲ್ಲಿ ನೀವು ನೀಡಿದ ದೂರಿನ ಸಂಬಂಧ A1 ಆರೋಪಿಯಿಂದ A 4 ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದೂ, ತನಿಕೆ ನಡೆಸಲು ತಕ್ಕುದಲ್ಲ, ಕಾನೂನಿನ ತಪ್ಪು ತಿಳುವಳಿಕೆಯಿಂದ ಕೂಡಿದೆ. ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ. ಸಾಕಷ್ಟು ಸಾಕ್ಷ್ಯಾಧಾರ ಗಳ ಕೊರೆತೆ ಇದೆ ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದೆ. ಆದ್ದರಿಂದ ಇದಕ್ಕೆ ವಿರೋಧವಿದ್ದರೆ ನೋಟಿಸ್ ತಲುಪಿದ ಒಂದು ವಾರದೊಳಗೆ ನ್ಯಾಯಾಧೀಶರಿಗೆ ತಿಳಿಸಿ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಆರ್ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ, ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ತನಿಖೆ ನಡೆಸುವಂತೆ ನಿರ್ದೇಶಿಸಿತ್ತು.