No menu items!
17.7 C
Munich
Friday, May 1, 2026

ಮುಡಾ ಪ್ರಕರಣ: ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

Must read

ಮುಡಾ ಪ್ರಕರಣ: ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು/ಮೈಸೂರು: ಮುಡಾ ಪ್ರಕರಣದ ರುವಾರಿಯಾಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ D.B. ನಟೇಶ್ ಅವರು ನೀಡಿದ ದೂರಿನ ಮೇರೆಗೆ ಈ ಬಂಧನ ನಡೆದಿದೆ.

ಇತ್ತೀಚೆಗೆ ಸ್ನೇಹಮಯಿ ಕೃಷ್ಣ, ನಟೇಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸುಮಾರು ಒಂದೂವರೆ ಕೋಟಿ ರೂ. ಹಣ ನೀಡಿ, ನಟೇಶ್ ಮುಂಬಡ್ತಿ ಪಡೆದಿದ್ದಾರೆ ಎಂದು ಆರೋಪಿಸಿದ್ದರು.

ಈ ಸಂಬಂಧ ನಟೇಶ್, ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದರು. ದೂರಿನ ಅನ್ವಯ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಬೆಂಗಳೂರು ಸೈಬರ್ ಪೊಲೀಸರು, ತನಿಖೆ ಮುಂದುವರಿಸಿ ಇಂದು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ.

- Advertisement -spot_img

More articles

- Advertisement -spot_img

Latest article