ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

Date:

ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿದ್ದರಾಮಯ್ಯ

 

ಮೈಸೂರು: ರಾಜ್ಯದಲ್ಲಿ ಮುಡಾ ಹಗರಣ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಇನ್ನು ಮುಡಾ ಹಗರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕಳಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ.
ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...