No menu items!
27.6 C
Munich
Tuesday, September 8, 2026

ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Must read

 

ಮೈಸೂರು: ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ನಗರದಲ್ಲಿ ಮಾತನಾಡಿದ ಅವರು, ನನ್ನ ಪತ್ನಿ ಬದಲಿ ನಿವೇಶನಕ್ಕೆ ಅರ್ಜಿ ಕೊಟ್ಟಾಗ ನಾನು ಸಿಎಂ ಆಗಿದ್ದೆ. ಸಿಎಂ ಆಗಿರುವ ತನಕ ಬದಲಿ ಭೂಮಿ ಕೊಡಬೇಡಿ ಎಂದು ನಾನು ಹೇಳಿದ್ದೆ. ಪ್ರಭಾವ ಬಳಸುವುದಿದ್ದರೆ ಅಂದೇ ಬಳಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಆಗಿ ಕೊಡಲು ಆಗಿತ್ತಿರಲಿಲ್ಲವಾ? ಬದಲಿ ಸೈಟ್ಗೆ ಮತ್ತೆ ನನ್ನ ಪತ್ನಿ 2021ರಲ್ಲಿ ಅರ್ಜಿ ಹಾಕಿದಾಗ ಬಿಜೆಪಿ ಸರ್ಕಾರ ಕಾನೂನಾತ್ಮಕವಾಗಿ ಭೂಮಿ ನೀಡಿದೆ. ಮುಡಾ ವಿಚಾರದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ಪ್ರಭಾವ ಬಳಸಿಲ್ಲ. ಬಿಎಸ್ಯಡಿಯೂರಪ್ಪ ಜೈಲಿಗೆ ಹೋಗಿದ್ದ ಪ್ರಕರಣವೇ ಬೇರೆ ಇದೇ ಬೇರೆ. ಯಡಿಯೂರಪ್ಪ ಡಿನೋಟಿಫೈ ಮಾಡಿದ್ದರು. ಚೆಕ್ ಮೂಲಕ ಹಣ ಪಡೆದಿದ್ದರು. ಇಲ್ಲಿ ನಾನು ಯಾವುದೇ ಹಣ ಪಡೆದಿಲ್ಲ ಪ್ರಭಾವ ಬೀರಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article