ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

Date:

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಬೆಂಗಳೂರು/ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನೀಡಿದ್ದ ಬಿ-ರಿಪೋರ್ಟ್‌ (ಕ್ಲೀನ್‌ಚಿಟ್) ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಸಲ್ಲಿಸಲಾದ ಬಿ-ರಿಪೋರ್ಟ್‌ಗೆ ವಿರೋಧ ವ್ಯಕ್ತಪಡಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಪುರಸ್ಕರಿಸಿ, ದೂರುದಾರರ ಅರ್ಜಿಯನ್ನು ವಜಾ ಮಾಡಿ ಜನವರಿ 22ರಂದು ಆದೇಶ ಹೊರಡಿಸಿದೆ.

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮಹತ್ವದ ರಿಲೀಫ್ ದೊರೆತಂತಾಗಿದೆ.

ಮುಡಾ ಹಗರಣದ ಕುರಿತು ತನಿಖೆ ನಡೆಸಿದ್ದ ಲೋಕಾಯುಕ್ತ, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜು ವಿರುದ್ಧ ಬಿ-ರಿಪೋರ್ಟ್ ಸಲ್ಲಿಸಿತ್ತು. ಆದರೆ, ಈ ವರದಿಯನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರಿಂದ ಪ್ರಕರಣ ಮತ್ತೆ ಚರ್ಚೆಗೆ ಬಂದಿತ್ತು.

ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ ಬಿ-ರಿಪೋರ್ಟ್ ಅನ್ನು ಅಂಗೀಕರಿಸಿರುವುದರಿಂದ ಪ್ರಕರಣಕ್ಕೆ ತಾತ್ಕಾಲಿಕ ಅಂತ್ಯ ಸಿಕ್ಕಂತಾಗಿದೆ.

ತಮ್ಮ ರಾಜಕೀಯ ಜೀವನದಲ್ಲಿ ಕ್ಲೀನ್ ಇಮೇಜ್ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದ ಸಿಎಂ ಸಿದ್ದರಾಮಯ್ಯಗೆ ಮುಡಾ ಹಗರಣ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆದರೆ, ನ್ಯಾಯಾಲಯದ ಇತ್ತೀಚಿನ ಆದೇಶದಿಂದಾಗಿ ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ನಿರಾಳರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ ಮುಂಬೈ:...

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ

ಅಜಿತ್ ಪವಾರ್ ಜನಸೇವೆಗೆ ಸದಾ ಮುಂಚೂಣಿಯಲ್ಲಿದ್ದರು: ಪ್ರಧಾನಿ ಮೋದಿ ಸಂತಾಪ ನವದೆಹಲಿ: ಮಹಾರಾಷ್ಟ್ರ...

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಅಜಿತ್ ಪವಾರ್ ಸಾವು ಆಘಾತಕಾರಿ; ರಾಜಕಾರಣಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು: ಡಿಸಿಎಂ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ವಜಾ

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್...