ಮುಡಾ ಹಗರಣ ವಿಚಾರ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ – ಮುಡಾ ಆಯುಕ್ತರಿಗೆ ಪತ್ರ!

Date:

ಮುಡಾ ಹಗರಣ ವಿಚಾರ: 14 ನಿವೇಶನ ವಾಪಸ್ ನೀಡಲು ಸಿಎಂ ಪತ್ನಿ ನಿರ್ಧಾರ – ಮುಡಾ ಆಯುಕ್ತರಿಗೆ ಪತ್ರ!

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಲಿ ಆಟ ನಿನ್ನೆಯಿಂದ ಶುರುವಾಗಿದೆ. ಮುಡಾ ಹಗರಣ ಬೆನ್ನತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರ ನಾಲ್ಕು ತನಿಖಾ ತಂಡ, ಅಕ್ರಮದ ಜಾಲ ಭೇದಿಸಲು ನಿನ್ನೆಯಿಂದ ಫೀಲ್ಡ್‌ಗಿಳಿದಿದೆ. ಆದ್ರೆ ಇದರ ಬೆನ್ನಲ್ಲೇ ಪತ್ನಿ ಪಾರ್ವತಿ ಅವರು ಮುಡಾಗೆ ಸೈಟ್ಗಳನ್ನು ಹಿಂದಿರುಗಿಸಲು ಮುಂದಾಗಿದ್ದಾರೆ.
ಮೈಸೂರಿನ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಡೆದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಸಿಎಂ ಪತ್ನಿ ಪಾರ್ವತಿ ಅವರು ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರಿಗೆ ರಾಜಜಕೀಯವಾಗಿ ಆಗುತ್ತಿರುವ ಸಂಕಷ್ಟವನ್ನು ನೋಡಲಾಗದೇ ಪತ್ನಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಖುದ್ದು ಮುಡಾಗೆ ಬರೆದ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಈ ಮೂಲಕ ಈ ಮುಡಾ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.
ಸಿಎಂ ಪತ್ನಿ ಮುಡಾಗೆ ಬರೆದ ಪತ್ರದಲ್ಲೇನಿದೆ.?
ಇವರಿಗೆ,
ಆಯುಕ್ತರು,
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಝಾನ್ಸಿ
ಲಕ್ಷ್ಮಿ ಬಾಯಿ ರಸ್ತೆ,
ಮೈಸೂರು,
ಕರ್ನಾಟಕ – 570 005

ಇಂದ,
ಶ್ರೀಮತಿ. ಪಾರ್ವತಿ,
W/o ಶ್ರೀ ಸಿದ್ದರಾಮಯ್ಯ,
R/a ‘ಕಾವೇರಿ’,
ಕುಮಾರ ಕೃಪಾ ರಸ್ತೆ,
ಬೆಂಗಳೂರು.

ಮಾನ್ಯರೇ,

ವಿಷಯ: ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವ ಕುರಿತು.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ತಾಲ್ಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ವಿಸ್ತೀರ್ಣದ ನನ್ನ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೆ ಉಪಯೋಗಿಸಿಕೊಂಡಿದ್ದಕ್ಕಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರವಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ವಿವಿಧ ಅಳತೆಯ 14 ನಿವೇಶನಗಳನ್ನು ಮಂಜೂರು ಮಾಡಿರುವುದು ನಿಮಗೆ ತಿಳಿದಿದೆ.

ಮುಂದುವರಿದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನನ್ನ ಪರವಾಗಿ ಕಾರ್ಯಗತಗೊಳಿಸಿದ 14 ನಿವೇಶನಗಳ ಕ್ರಯಪತ್ರಗಳನ್ನು ರದ್ದುಗೊಳಿಸುವ ಮೂಲಕ ನಾನು ಪರಿಹಾರದ ನಿವೇಶನಗಳನ್ನು ಒಪ್ಪಿಸಲು ಮತ್ತು ಹಿಂತಿರುಗಿಸಲು ಬಯಸುತ್ತೇನೆ. ನಿವೇಶನಗಳ ಸ್ವಾಧೀನವನ್ನು ಸಹ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಮರಳಿ ಹಸ್ತಾಂತರಿಸುತ್ತಿದ್ದೇನೆ. ದಯವಿಟ್ಟು ಈ ನಿಟ್ಟಿನಲ್ಲಿ ಆದಷ್ಟು ಬೇಗ ಅಗತ್ಯ ಕ್ರಮಗಳನ್ನು ಕೈಗೊಳ್ಳಿ.

ವಂದನೆಗಳೊಂದಿಗೆ.

ತಮ್ಮ ವಿಶ್ವಾಸಿ
ಶ್ರೀಮತಿ. ಪಾರ್ವತಿ

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...