ಕೋಲಾರ:-ಮುಡಾ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹೀಗಾಗಲೇ ಪ್ರತಿಪಕ್ಷಗಳು ಹೋರಾಟಕ್ಕಿಳಿದಿದೆ.
ಈ ಮಧ್ಯೆಯಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ ಆಗುತ್ತಿದೆ. ಈಗಾಗಲೇ ಮುಡಾ ಸೈಟ್ ವಾಪಸ್ ಕೊಡುವ ಬಗ್ಗೆ ಹೇಳಾಗಿದೆ. 2005 ರಿಂದ ಯಾರಿಗೆಲ್ಲಾ ನಿವೇಶನ ಕೊಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಅರ್ಥ ನಮಗೆ ಕೊಟ್ಟಿರುವ ನಿವೇಶನವೂ ರದ್ದಾಗಿದೆ ಎಂಬುದು. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.
ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ಸೈಟ್ ನಮ್ಮದಲ್ಲ. ತನಿಖೆ ಮಾಡಿ ನಮ್ಮದು ಎಂದರೆ ನಿವೇಶನ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ತಂದೆ ಭ್ರಷ್ಟಾಚಾರ ಮಾಡಿದ್ದಾರೆಂದು ಬಿಂಬಿಸುವುದು ಸರಿಯಲ್ಲ ಎಂದು ಯತೀಂದ್ರ ಹೇಳಿದ್ದಾರೆ.
ಒಟ್ನಲ್ಲಿ ಮುಡಾ ಹಗರಣ, ಹಾಗೂ ವಾಲ್ಮೀಕಿ ಬಹುಕೋಟಿ ಹಗರಣ ಸಿದ್ದರಾಮಯ್ಯ ಕುರ್ಚಿ ನಡುಗಿಸಿದ್ದು, ರಾಜ್ಯ ಸರ್ಕಾರದ ಅವನತಿಯ ಪ್ರಶ್ನೆ ಎದ್ದಿದೆ.