ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸದ್ಯ ಸಂಕಷ್ಟ ಎದುರಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. 6 ವಾರಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್ ಆದೇಶಿಸಿದೆ. CRPC ಸೆಕ್ಷನ್ 156(3) ಅಡಿ ಕೇಸ್ ರಿಜಿಸ್ಟರ್ ಮಾಡಲು ಆದೇಶ ನೀಡಲಾಗಿದ್ದು, ತನಿಖಾ ವರದಿ ನೀಡಲು 3 ತಿಂಗಳ ಗಡುವು ನೀಡಲಾಗಿದೆ. ಅಂದ್ರೆ ಡಿಸೆಂಬರ್ 24 2024ಕ್ಕೆ ತನಿಖಾ ವರದಿ ನೀಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ.