ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಇದೀಗ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಲಿದೆ.
ಸ್ನೇಹಮಯಿ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸವಿಲ್ಲದಿರುವುದಾಗಿ ಹೇಳಿದ್ದಾರೆ ಮತ್ತು ಸಿಬಿಐ ತನಿಖೆಯಿಂದ ಮಾತ್ರ ನ್ಯಾಯ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಲವು ಪ್ರಮುಖ ವಕೀಲರು ಈ ಪ್ರಕರಣದಲ್ಲಿ ವಾದಿಸುತ್ತಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು, ಈಗಾಗಲೆ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಇಂದು ಬಹುತೇಕ ನ್ಯಾಯಾಲಯದಿಂದ ಆದೇಶ ಬರುವ ಸಾಧ್ಯತೆ ಇದೆ.