ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

Date:

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವು ಮಂದಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಹಿಂದೆ ಅಂಗೀಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಿದ್ದರಾಮಯ್ಯ (A1), ಪಾರ್ವತಿ (A2) ಸೇರಿದಂತೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ ಹಾಗೂ ಇತರ ಆರೋಪಿಗಳಾದ ಮಲ್ಲಿಕಾರ್ಜುನ ಸ್ವಾಮಿ (A3) ಮತ್ತು ದೇವರಾಜು (A4) ಅವರಿಗೆ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸೇರಿದಂತೆ ನಾಲ್ವರನ್ನು ದೋಷಮುಕ್ತಗೊಳಿಸಿದ್ದರೂ, ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸಲು ಸೂಚಿಸಿತ್ತು.ಇದೀಗ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮತ್ತೊಮ್ಮೆ ತಿರುವು ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ ಗಾಯ

ಆಂಧ್ರಪ್ರದೇಶದಲ್ಲಿ ಬಸ್-ಟಿಪ್ಪರ್ ಡಿಕ್ಕಿ: 12 ಮಂದಿ ಸಜೀವ ದಹನ, 20 ಜನರಿಗೆ...

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು!

ಶೌಚಾಲಯದಲ್ಲಿ ಫೋನ್ ಬಳಸುತ್ತೀರಾ? ನಿಮಗೆ ಗೊತ್ತಿಲ್ಲದ ಈ ಸಮಸ್ಯೆಗಳು ಕಾಡಬಹುದು! ಇತ್ತೀಚಿನ ದಿನಗಳಲ್ಲಿ...

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...