ಮುತ್ತಪ್ಪ ರೈ ಇನ್ನು ನೆನಪು ಮಾತ್ರ

admin
1 Min Read

ಭೂಗತ ಲೋಕವನ್ನಾಳಿದ್ದ, ಬಳಿಕ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್.ಮುತ್ತಪ್ಪ ರೈ ವಿಧಿವಶರಾಗಿದ್ದಾರೆ. ಗುರುವಾರ ತಡರಾತ್ರಿ ರಾಜಧಾನಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ರೈ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮೇ.15 ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ ಎಂದು ಹೇಳಲಾಗಿದೆ.

ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ಅವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದರಂತೆ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು.

ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಅವರು ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು.

Share This Article
Leave a Comment