ಜ್ಞಾನ ಭಾರತಿ ವಾರ್ಡ್ ಅಧ್ಯಕ್ಷ ಎನ್.ಆರ್. ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ.
ಬೆಂಗಳೂರು ನಗರ ಅಧ್ಯಕ್ಷ ಮುನಿರಾಜು ಸೂಚನೆ ಮೇರೆಗೆ ರಾಜರಾಜೇಶ್ವರಿ ನಗರ ಬಿಜೆಪಿ ಅಧ್ಯಕ್ಷ ಲಕ್ಷ್ಮಿಕಾಂತ ರೆಡ್ಡಿ 6 ವರ್ಷಗಳ ಕಾಲ ಕುಮಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರಿಗೆ ಮುನಿರತ್ನ ಕಿರುಕುಳ ನೀಡಿದ್ದ ಹಿನ್ನಲೆಯಲ್ಲಿ ಅವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿ ಕುಮಾರ್ ಪತ್ರ ಬರೆದಿದ್ದರು. ಆದರೆ, ಪಕ್ಷದ ವರಿಷ್ಠರು ಮುನಿರತ್ನ ಸೇರ್ಪಡೆಗೆ ತೀರ್ಮಾನಿಸಿದ್ದಾರೆ , ಹೀಗಾಗಿ ಕುಮಾರ್ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎನ್ನಲಾಗಿದೆ .