ಮುಸ್ಲಿಂ & ಕ್ರೈಸ್ತರು ಆದಷ್ಟು ಬೇಗ ಹಿಂದೂ ಧರ್ಮಕ್ಕೆ: ತೇಜಸ್ವಿ ಸೂರ್ಯ

Date:

ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಜನರಿಗೆ ಕರೆ ನೀಡಿದ್ದಾರೆ.

ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಮಠದ ಪರ್ಯಾಯ ಮಂಗಲೋತ್ಸವದ ವಿಶ್ವಾರ್ಪಣಂ ನ 20ನೇ ದಿನ ಸಮಾರಂಭದಲ್ಲಿ ರಾಜಕಾರಣದಲ್ಲಿ ಯುವ ಪೀಳಿಗೆ ಪ್ರವೇಶ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ. ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನಿಗೆ ಮತಾಂತರಗೊಂಡವರನ್ನು ಭಾರತಕ್ಕೆ ತರಬೇಕು. ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದು ಹೇಳಿದರು.

ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎಂಬುದು ಯಾವುದೂ ಇಲ್ಲ. ನಮ್ಮ ಮನೆ, ಅಕ್ಕ-ಪಕ್ಕದ ಗ್ರಾಮ, ಊರುಗಳಲ್ಲಿ ಘರ್ ವಾಪಸೀ ಮಾಡಬೇಕು. ನಾವು ದೊಡ್ಡದಾಗಿ ಕನಸನ್ನು ಕಾಣಬೇಕು ಎಂದರು.
ಈ ದೇಶದಲ್ಲಿ ರಾಮಮಂದಿರವನ್ನು ಸ್ಥಾಪನೆ ಮಾಡಿದ್ದೇವೆ. ಕಾಶ್ಮೀರದ 370 ಕಾಯ್ದೆಯನ್ನು ತೆಗೆದು ಹಾಕಿದ್ದೇವೆ. ಪಾಕಿಸ್ತಾನದ ಮುಸಲ್ಮಾನರನ್ನು ಹಿಂದೂಗಳಾಗಿ ಪರಿವರ್ತನೆ ಮಾಡಬೇಕು. ಘರ್ ವಾಪಸೀಯನ್ನು ಆದ್ಯ ಕರ್ತವ್ಯದ ರೀತಿಯಲ್ಲಿ ನಾವು ಮಾಡಬೇಕಾಗಿದೆ. ಅಖಂಡ ಭಾರತದ ಕಲ್ಪನೆಯಲ್ಲಿ ಪಾಕಿಸ್ತಾನವೂ ಇದೆ. ಮಠ ದೇವಸ್ಥಾನ ಇದರ ಮುಂದಾಳತ್ವ ವಹಿಸಬೇಕು ಎಂದು ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಕರೆ ನೀಡಿದರು.

ಭಾರತದಲ್ಲಿ ಶೇ. 80ರಷ್ಟಿರುವ ಹಿಂದುಗಳ ದೇವಾಲಯಗಳನ್ನು ಸರ್ಕಾರ ತನ್ನ ವಶದಲ್ಲಿಟ್ಟುಕೊಂಡಿವೆ, ಆದರೆ ಚರ್ಚ್, ಮಸೀದಿಗಳನ್ನು ಮಾತ್ರ ಆಯಾ ಧರ್ಮದವರಿಗೆ ನೀಡಿದೆ. ಅಂದರೆ ಇದು ಹಿಂದುಗಳಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...