ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್
ಬೆಂಗಳೂರು: ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಾದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ.
ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ಮೊಬೈಲ್ ಕೊಟ್ಟಿದ್ದು ಯಾರು ಎಂದು ತನಿಖೆ ಮಾಡಬೇಕಿದೆ ಅಥವಾ ಮೊಬೈಲ್ ಬಳಸಿ ಏನು ಮಾಡಿದ್ದಾರೆ ಎಂದು ತನಿಖೆ ಮಾಡಬೇಕಿತ್ತು. ಆದರೆ ಈ ವೀಡಿಯೋ ಹೊರಗೆ ಬಂದಿದ್ದು ಹೇಗೆ ಎಂದು ತನಿಖೆ ಮಾಡಲಾಗುತ್ತಿದೆ.
ಕೇಂದ್ರ ಸರ್ಕಾರದಂತೆಯೇ ರಾಜ್ಯ ಸರ್ಕಾರ ಕೂಡ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರ ಪರವಾದ ಮೃದುವಾದ ಧೋರಣೆ ಒಳ್ಳೆಯದಲ್ಲ ಎಂದರು. ಸಚಿವ ಪ್ರಿಯಾಂಕ್ ಖರ್ಗೆ ದೆಹಲಿಯನ್ನು ನೋಡಬೇಕಿಲ್ಲ. ಮಲ್ಲಿಕಾರ್ಜುನ ಖರ್ಗೆ ಗೃಹ ಸಚಿವರಾಗಿದ್ದಾಗ ದಲಿತರನ್ನು ಸುಟ್ಟು ಹಾಕಲಾಗಿತ್ತು. ಆ ಪ್ರಕರಣದಲ್ಲಿ ಖರ್ಗೆಯವರ ವಿಫಲತೆಯನ್ನು ಇವರು ಮೊದಲು ನೋಡಲಿ. ಅಮಿತ್ ಶಾ ಬಗ್ಗೆ ಮಾತನಾಡುವ ನೈತಿಕತೆ ಇವರಿಗೆ ಇಲ್ಲ ಎಂದರು.






