No menu items!
3.9 C
Munich
Wednesday, September 23, 2026

ಮೂಡಾ ಸೈಟ್ ಹಂಚಿಕೆ ವಿಚಾರದಲ್ಲಿ ಸಿಎಂಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ!

Must read

ಮೂಡಾ ಸೈಟ್ ಹಂಚಿಕೆ ವಿಚಾರದಲ್ಲಿ ಸಿಎಂಗೆ ಕ್ಲೀನ್ ಚಿಟ್ ನೀಡಿದ ಲೋಕಾಯುಕ್ತ!

ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಸಂಬಂಧ ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆಯಂತೆ.
ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ.
ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ‌ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -spot_img

More articles

- Advertisement -spot_img

Latest article