ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ನಗರದಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿವಮೊಗ್ಗದ ಫ್ರೀಡಂ ಪಾರ್ಕ್ ನ ಅಲ್ಲಮಪ್ರಭು ಮೈದಾನದಲ್ಲಿ ಇಂದು ಬಿಜೆಪಿಯಿಂದ ಲೋಕಸಭಾ ಚುನಾವಣೆ ಸಲುವಾಗಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಶೇಷ ವಿಮಾನದಲ್ಲಿ ಶಿವಮೊಗ್ಗ ಏರ್ ಪೋರ್ಟ್ ಗೆ ಬಂದು ಇಳಿದಿದ್ದಾರೆ.
ಶಿವಮೊಗ್ಗ ಏರ್ ಪೋರ್ಟ್ ಮೂಲಕ ರಸ್ತೆ ಮಾರ್ಗವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿರುವಂತ ಅಲ್ಲಮಪ್ರಭು ಮೈದಾನಕ್ಕೆ ತೆರಳಲಿದ್ದಾರೆ. ಅಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ಮೂರನೇ ಬಾರಿ ಶಿವಮೊಗ್ಗ ಜಿಲ್ಲೆಗೆ ಪ್ರಧಾನಿ ಮೋದಿ ಆಗಮನ
Date: