ವಿರೋಧ ಪಕ್ಷದ ನಾಯಕನ ಸ್ಥಾನ ಪಡೆದುಕೊಳ್ಳಲು ಈ ಮೂವರು ನಾಯಕರು ಪೈಪೋಟಿ ನಡೆಸಿದ್ದಾರೆ. ಸಿದ್ದರಾಮಯ್ಯ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ವಿರೋಧಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದು, ಈ ಬಾರಿಯೂ ವಿರೋಧ ಪಕ್ಷದ ನಾಯಕನ ಸ್ಥಾನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದು ಎರಡು ಅವಧಿಗೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರು ಕೂಡ ತಮಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಡಿ.ಕೆ. ಶಿವಕುಮಾರ್ ಅವರು 3 -4 ದಶಕಗಳಿಂದ ಪಕ್ಷಕ್ಕಾಗಿ ದುಡಿದಿದ್ದೇನೆ. ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆಸಿದ್ದು ತಮಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಬೇಕೆಂದು ಹೇಳಿದ್ದಾರೆನ್ನಲಾಗಿದೆ. ರಾಜ್ಯ ರಾಜಕೀಯದಲ್ಲಿ ಅನಿಶ್ಚಿತ ಬೆಳವಣಿಗೆಗಳು ನಡೆಯುತ್ತಿದ್ದು ಯಾವ ಕ್ಷಣದಲ್ಲಾದರೂ ಮಧ್ಯಂತರ ಚುನಾವಣೆ ಬರಬಹುದೆಂಬ ಲೆಕ್ಕಾಚಾರವಿದೆ. ಈ ಕಾರಣದಿಂದ ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗುವುದು. ಯಾರನ್ನು ಆಯ್ಕೆ ಮಾಡಲಾಗುವುದು ಎನ್ನುವುದು ಕುತೂಹಲ ಮೂಡಿಸಿದೆ.