No menu items!
18.4 C
Munich
Friday, August 21, 2026

ಮೂವರು ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ..!

Must read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ದ್ವಿತೀಯ ಪಿಯುಸಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆದ ಘಟನೆ ವರದಿಯಾಗಿದೆ . ಕಿರಾತಕನೋರ್ವ ಮೂವರು ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ಹಾಕಿ ಪರಾರಿಯಾಗಿದ್ದಾನೆ. ಮೂವರು ವಿದ್ಯಾರ್ಥಿನಿಯರ ಮುಖಕ್ಕೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಳಿಗೆ ಒಳಗಾದ ವಿದ್ಯಾರ್ಥಿನಿಯರನ್ನು ಅಲೀನಾ ಸಿಬಿ,ಅರ್ಚನಾ,ಅಮೃತ ಎಂದು ತಿಳಿದುಬಂದಿದೆ.ಆರೋಪಿ ಕೇರಳ ಮೂಲದವ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ.

- Advertisement -spot_img

More articles

- Advertisement -spot_img

Latest article