ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅನುಮಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಚೆನ್ನರೆಡ್ಡಿ ಪಾಟೀಲ್ ವಿರುದ್ಧ ಎಫ್ಐಆರ್ ಆಗಿದ್ದು, ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಇನ್ನು ಮೃತ ಪರಶುರಾಮ್ ಪತ್ನಿಗೆ ಪರಿಹಾರದ ಜೊತೆಗೆ ಸರ್ಕಾರಿ ಹುದ್ದೆ ನೀಡಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಸಿಐಡಿ ತನಿಖೆಗೆ ಪ್ರಕರಣವನ್ನು ಕೊಟ್ಟಿದ್ದೇವೆ, ತನಿಖೆ ನಡೆಯುತ್ತಿದೆ. ಇದು ಆತ್ಮಹತ್ಯೆ ಅಲ್ಲ, ಅಂತ ಇಲಾಖೆ ಹೇಳಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ಕಾರಣ ಗೊತ್ತಾಗುತ್ತೆ.
ಪರಶುರಾಮ್ ಪತ್ನಿಗೆ ಇಲಾಖೆಯಲ್ಲಿ ಕೆಲಸ, ಪರಿಹಾರ ಕೊಡೋಕೆ ಸರ್ಕಾರ ತೀರ್ಮಾನ ಸರ್ಕಾರ ಮಾಡಿದೆ ಎಂದು ತಿಳಿಸಿದ್ದಾರೆ 10 ತಿಂಗಳು ಸರ್ಕಾರ ಇರಲ್ಲ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಮಾತುಗಳು ಬರೋದು ಸ್ವಾಭಾವಿಕ. ಅಸ್ಥಿರವಾಗುವ ಸೂಚನೆಗಳು ನಮ್ಮಲ್ಲಿ ಕಾಣಿಸ್ತಿಲ್ಲ ಎಂದು ತಿಳಿಸಿದ್ದಾರೆ.