ಮೆಟ್ರೋ ಕಾಮಗಾರಿ ವೇಳೆ ದುರಂತ: ಆಟೋ ಚಾಲಕ ಸಾವು

Date:

ಮೆಟ್ರೋ ಕಾಮಗಾರಿ ವೇಳೆ ದುರಂತ: ಆಟೋ ಚಾಲಕ ಸಾವು

ಬೆಂಗಳೂರು: ರಾಜಧಾನಿ ಜನರ ವೇಗದ ಸಂಪರ್ಕ ಸಾಧನ ನಮ್ಮ ಮೆಟ್ರೋ ಕಾಮಗಾರಿ ವೇಳೆ ದುರಂತವೊಂದು ನಡೆದಿದೆ. ಮೆಟ್ರೋ ಕಾಮಗಾರಿಗೆ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ ಉರುಳಿ ಬಿದ್ದು, ಓರ್ವ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ಜರುಗಿದೆ.
ಖಾಸಿಂ ಸಾಬ್ ಮೃತ ಆಟೋ ಚಾಲಕನಾಗಿದ್ದು, ಈತ ಮೂಲತಃ ಹೆಗಡೆನಗರದ ನಿವಾಸಿ. ಪ್ಯಾಸೆಂಜರ್ ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ತಡರಾತ್ರಿ 12:05 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ. ಆದ್ರೆ ಆಟೋದಲ್ಲಿದ್ದ ಪ್ಯಾಸೆಂಜರ್‌ ಕೊಂಚದರಲ್ಲೇ ಎಸ್ಕೇಪ್‌ ಆಗಿದ್ದಾರೆ.
ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಬೃಹತ್‌ ಗಾತ್ರದ ವಯಾಡೆಕ್ಟ್ ಕೊಂಡೊಯ್ಯಲಾಗುತ್ತಿತ್ತು. ಏರ್ಪೋಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ 18 ಚಕ್ರದ ದೊಡ್ಡ ಲಾರಿಯಲ್ಲಿ ವಯಾಡೆಕ್ಟ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಕೋಗಿಲು ಕ್ರಾಸ್‌ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ತುಂದಾಗಿದೆ. ಪರಿಣಾಮ ವಯಾಡೆಕ್ಟ್‌ ನೆಲಕ್ಕುರುಳಿದೆ.
ಇದೇ ಸಂದರ್ಭದಲ್ಲಿ ಲಾರಿ ಪಕ್ಕದಲ್ಲೇ ಇದ್ದ ಆಟೋ ಮೇಲೆ ವಯಾಡೆಕ್ಟ್‌ ಬಿದ್ದಿದೆ. ಲಾರಿ ತುಂಡಾಗಿ ವಯಾಡೆಕ್ಟ್‌ ಬೀಳುತ್ತಿದ್ದಂತೆ ಆಟೋದಲ್ಲಿದ್ದ ಪ್ಯಾಸೆಂಜರ್‌ ತಕ್ಷಣಕ್ಕೆ ಇಳಿದು ಓಡಿಹೋಗಿದ್ದಾರೆ, ಆದ್ರೆ, ಚಾಲಕ ಇಳಿಯುವಷ್ಟರಲ್ಲಿ ಆಟೋ ಮೇಲೆ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಸಹ ಸಂಪೂರ್ಣ ಅಪ್ಪಚ್ಚಿಯಾಗಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...