No menu items!
30.9 C
Munich
Thursday, June 18, 2026

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

Must read

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ನಾಳೆ ಈ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ!

ಬೆಂಗಳೂರು:- ನಿರ್ವಹಣಾ ಕಾಮಗಾರಿ ಹಿನ್ನೆಲೆ ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದ ರೈಲು ಓಡಾಟದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ BMRCL ಮನವಿ ಮಾಡಿದೆ.

ನಾಳೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಮೆಟ್ರೋ ಸೇವೆ ಸಂಚಾರ ಬಂದ್ ಇರಲಿದೆ. ಎಂಜಿ ರಸ್ತೆ-ಬೈಯ್ಯಪ್ಪನಹಳ್ಳಿ ಮಾರ್ಗದ ಮಧ್ಯೆ ತಾತ್ಕಾಲಿಕ ಸ್ಥಗಿತವಾಗಲಿದೆ. ಹಲಸೂರು ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆ ಯಿಂದ 9 ಗಂಟೆಯವರೆಗೆ ಸಂಚಾರ ವ್ಯತ್ಯಯ ಆಗಲಿದೆ. ಇನ್ನು ಚಲ್ಲಘಟ್ಟದಿಂದ ಎಂಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಫೀಲ್ಡ್ ನಡುವೆ ಎಂದಿನಂತೆ ರೈಲುಗಳು ಸಂಚರಿಸಲಿವೆ ಎಂದು BMRCL ಮಾಹಿತಿ ನೀಡಿದೆ.

ಇನ್ನೂ ಎಂದಿನಂತೆ ಭಾನುವಾರ ಬೆಳಿಗ್ಗೆ ನೇರಳೆ ಮಾರ್ಗದ ಇತರೆ ಮಾರ್ಗಗಳಾದ ಚಲ್ಲಘಟ್ಟದಿಂದ ಎಂಜಿ ರಸ್ತೆ ಮತ್ತು ಬೈಯ್ಯಪ್ಪನಹಳ್ಳಿಯಿಂದ ವೈಟ್‌ಪೀಲ್ಡ್ ನಡುವೆ ಎಂದಿನಂತೆ ರೈಲುಗಳಿ ಸಂಚಾರ ನಡೆಸುತ್ತಿವೆ. ಇನ್ನು ಹಸಿರು ಮಾರ್ಗದ ರೇಷ್ಮೆ ಸಂಸ್ಥೆ ಮತ್ತು ಮಾದಾವರ ನಡುವೆ ಮೆಟ್ರೋ ಸೇವೆಗಳು ಬೆಳಿಗ್ಗೆ 7.00 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ.

- Advertisement -spot_img

More articles

- Advertisement -spot_img

Latest article