ಮೆಟ್ರೋ ಹಳದಿ ಮಾರ್ಗದ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ!
ಬೆಂಗಳೂರು: ರಾಜಧಾನಿಯ ಹಳದಿ ಮಾರ್ಗ ಮೆಟ್ರೋ ಸೇವೆ ಇಂದು ಅಧಿಕೃತವಾಗಿ ಪ್ರಾರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ಆರ್.ವಿ. ರಸ್ತೆ–ಬೊಮ್ಮಸಂದ್ರ ನಡುವೆ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಮನೋಹರ್ ಲಾಲ್ ಖಟ್ಟರ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದರು.
2014ರಲ್ಲಿ ಪ್ರಾರಂಭಗೊಂಡ ಈ ಯೋಜನೆ 2021ರಲ್ಲಿ ಪೂರ್ಣಗೊಳ್ಳಬೇಕಾಗಿದ್ದರೂ ವಿಳಂಬವಾಗಿ ಇದೀಗ ಉದ್ಘಾಟನೆಯಾಗಿದೆ. 7,616 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾದ ಹಳದಿ ಮಾರ್ಗವು 19.15 ಕಿಮೀ ಉದ್ದವಿದ್ದು,
ಒಟ್ಟು 16 ನಿಲ್ದಾಣಗಳನ್ನು ಹೊಂದಿದೆ. ಇವುಗಳಲ್ಲಿ ಆರ್.ವಿ. ರಸ್ತೆ, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್, ಬೊಮ್ಮನಹಳ್ಳಿ, ಹೊಂಗಸಂದ್ರ, ಕೂಡ್ಲು ಗೇಟ್, ಸಿಂಗಸಂದ್ರ, ಹೊಸೂರು ರಸ್ತೆ, ಬೆರಟೇನ ಅಗ್ರಹಾರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪ ಅಗ್ರಹಾರ, ಹುಸ್ಕೂರು ರಸ್ತೆ, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ಸೇರಿವೆ.