ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆದೇವರನ್ನು ನೆನೆದ ಸಿದ್ದರಾಮಯ್ಯ!

Date:

ಮಂಡ್ಯ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ ಎಂದು ಹಾಡು ಹೇಳುತ್ತಾ ಮನೆ ದೇವರನ್ನು ನೆನೆದಿದ್ದಾರೆ.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವ್ಥಾನ ಪುನರ್ ನಿರ್ಮಾಣ, ವಿಗ್ರಹಗಳ ಸ್ಥಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ ಮಾತನಾಡುವ ವೇಳೆ ತಾವು ಬಾಲ್ಯದಲ್ಲಿ ಹಾಡುತ್ತಿದ್ದ, ವೀರ ಕುಣಿತದಲ್ಲಿ ನರ್ತಿಸುತ್ತಿದ್ದದ್ದನ್ನು ಉಲ್ಲೇಖಿಸಿ ಲಾವಣಿ ಹಾಡಿದರು.

ಸಿದ್ದರಾಮೇಶ್ವರ ಪೂಜೆಗೆ ವೀರಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದರು.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು ಎಂದರು.

ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಸುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದರು.

ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ. ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶಿಕ್ಷಣ ಮತ್ತು ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು ಎಂದರು.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...