ಮೇ 14ರವರೆಗೆ ಹೆಚ್ ಡಿ ರೇವಣ್ಣಗೆ ನ್ಯಾಯಾಂಗ ಬಂಧನ !

0 Min Read

ಬೆಂಗಳೂರು: ಮಾಜಿ ಸಚಿವ ಹೆಚ್‌ʼಡಿ ರೇವಣ್ಣ ಜೈಲುಪಾಲಾಗಿದ್ದಾರೆ. ಕೆಆರ್‌ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್‌ ಆದೇಶ ಪ್ರಕಟಿಸಿದೆ. ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ಏಳು ದಿನ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

Share This Article