ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿ! ವಿಷದ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ

tnit editors
1 Min Read

ಮೈಕ್ರೋ ಫೈನಾನ್ಸ್ ಸಾಲಕ್ಕೆ ಮತ್ತೊಂದು ಬಲಿ! ವಿಷದ ಮಾತ್ರೆ ಸೇವಿಸಿ ಮಹಿಳೆ ಆತ್ಮಹತ್ಯೆ

ಮೈಸೂರು: ವಿಪರೀತ ಬಡ್ಡಿ, ಸಾಲ ಮರುಪಾವತಿಯ ಕಂತು ಹೆಚ್ಚಳ, ಕಟ್ಟದಿದ್ದರೆ ನಾನಾ ಕಿರುಕುಳ. ಮೈಕ್ರೋ ಫೈನಾನ್ಸ್ ಹಾವಳಿಗೆ ಊರು ಬಿಟ್ಟ ಜನ. ಇತ್ತೀಚೆಗೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಸಾರ ಆಗ್ತಿರೋ ಸುದ್ದಿ ಇದು. ಈ ನಡುವೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್‌ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಈಕೆ ಐಐಎಫ್‌ಎಲ್, ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್‌ನಲ್ಲಿ ಮನೆ, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ಸಾಲ ಪಡೆದಿದ್ದರು. ಪ್ರತಿ ತಿಂಗಳು 20,000ಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು.
ಸಾಲದಲ್ಲಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿತ್ತು. ಈ ಹಿನ್ನೆಲೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಈ ಹಿನ್ನೆಲೆ ಸಮೀಪದ ಹುಲ್ಲಹಳ್ಳಿಗೆ ತೆರಳಿ ವಿಷದ ಮಾತ್ರೆಗಳನ್ನು ತಂದು ಜಮೀನಿನಲ್ಲಿ ನುಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article