ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ!
ಬೆಂಗಳೂರು: ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.
ಇತ್ತ ಶಿಗ್ಗಾಂವಿ ಉಪಕದನ ಕಣದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅಖಾಡಕ್ಕೆ ಧುಮುಕಿದ್ದು ಸಾಂಕೇತಿಕವಾಗಿ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಇತ್ತ ಕೈ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಇಂದು ಅದ್ಧೂರಿ ಮೆರವಣಿಗೆ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಕೂಡಾ ಇವತ್ತು ಉಮೇದುವಾರಿಕೆ ಸಲ್ಲಿಸಲಿದ್ದಾರೆ.