ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಸೋಲಿಗೆ ಹಲವಾರು ಕಾರಣಗಳಿದೆ.ಮೈತ್ರಿ ಮಾಡಿಕೊಂಡಿದ್ದೇ ಸೋಲಿಗೆ ಕಾರಣ ಎಂದು ಯಾರೂ ಹೇಳಿಲ್ಲ, ಎಲ್ಲಾ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸಲು ಆಗುವುದಿಲ್ಲ ಎಂದರು.
ವೋಟ್ ಹಾಕೋದು ಮೋದಿಗೆ, ಕೆಲಸ ನನ್ನ ಬಳಿ ಕೇಳ್ತಿರಾ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಚುಟುಕಾಗಿ ಪ್ರತಿಕ್ರಿಯಿಸಿದರು.