ಜೆಡಿಎಸ್ ಕಾರ್ಯಕರ್ತರ ಸಂಘಟನಾ ಸಮಾವೇಶ ದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ,ಪ್ರತಿಯೊಂದು ವಿಚಾರಕ್ಕೂ ಮರ್ಜಿಯಲ್ಲಿ ಕೆಲಸ ಮಾಡಬೇಕಿತ್ತು. ಪಕ್ಷದ ಕಾರ್ಯಕರ್ತರ ನಿರೀಕ್ಷೆಯನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಆದರೂ ಹೊಂದಾಣಿಕೆ ಮಾಡಿಕೊಂಡು ಸರ್ಕಾರವನ್ನು ಮುನ್ನಡೆಸಬೇಕಿತ್ತು.
ಮೈತ್ರಿ ಸರ್ಕಾರದಲ್ಲಿ ನಾನು ನೆಪ ಮಾತ್ರಕ್ಕೆ ಮುಖ್ಯಮಂತ್ರಿಯಾಗಿದ್ದು, ಸ್ವತಂತ್ರ ನಿರ್ಧಾರ ಕೈಗೊಳ್ಳಲು ಅವಕಾಶ ಇರಲ್ಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.