ಶಾಸಕರ ಅನರ್ಹತೆ ಕುರಿತ ಅರ್ಜಿ ವಿಚಾರಣೆ ವಿಳಂಬದಿಂದ ಆತಂಕಕ್ಕೆ ಒಳಗಾಗಿದ್ದ ಅನರ್ಹ ಶಾಸಕರು ನಿರಾಳರಾಗಿದ್ದಾರೆ. ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದ್ದು ಶೀಘ್ರವೇ ತ್ರಿಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ಸಮ್ಮತಿ ನೀಡುತ್ತಿದ್ದಂತೆ ಅನರ್ಹ ಶಾಸಕರಲ್ಲಿ ಸಂತೋಷ ಮನೆಮಾಡಿದೆ. ಸ್ಪೀಕರ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದರೆ ಶೀಘ್ರವೇ ಅನರ್ಹ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಅನರ್ಹ ಶಾಸಕರೆಲ್ಲರಿಗೂ ಸಚಿವ ಸ್ಥಾನ ನೀಡಬೇಕೆಂಬುದು ಬಿಜೆಪಿ ಲೆಕ್ಕಾಚಾರವಾಗಿದೆ