ಅಥಣಿ ಪಟ್ಟಣದಲ್ಲಿ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಶಾಸಕ ಲಕ್ಷ್ಮಣ ಸವದಿ ಅವರು ಮೈತ್ರಿ ಸರ್ಕಾರ ಹೊಸದಾಗಿ ಮದುವೆಯಾದ ಗಂಡ ಹೆಂಡತಿಯಂತಿದೆ. ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ತಂತಿ ಇಲ್ಲ ಎಂದು ಲೇವಡಿ ಮಾಡಿದರು.
ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಯಾವುದೇ ಹೊಸ ಯೋಜನೆ ಇಲ್ಲ. ಮೈತ್ರಿ ಸರ್ಕಾರ ಏನು ಮಾಡುತ್ತಿದೆ.? ರಾಜ್ಯಕ್ಕೆ ಇವರ ಕೊಡುಗೆ ಏನು..? ಮೈತ್ರಿ ಸರ್ಕಾರ ಯಾವ ಅಭಿವೃದ್ಧಿ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೂ 20 ವರ್ಷಗಳ ಹಳೆಯ ರಾಜಕೀಯ ದ್ವೇಷವಿದೆ.2004 ರಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ಆದರೆ ದೇವೇಗೌಡರು ಅದಕ್ಕೆ ಅಡ್ಡಗಾಲು ಹಾಕಿ ಆ ಅವಕಾಶ ಕಸಿದುಕೊಂಡಿದ್ದರು. ಅದಕ್ಕೆ ಸಿದ್ದು ಅವರ ಜೊತೆ ಮೈತ್ರಿ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ, ಈ ಮೂಲಕ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.