ಈ ಬಗ್ಗೆ ಮಾತನಾಡಿದ ದೇವೇಗೌಡ ಅವರು ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿಯವರು ರಾಜ್ಯದ ಉಪಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ಕಾದು ನೋಡಬೇಕು ಎಂದರು.
ಸ್ಥಳೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಸೋನಿಯಾ ಗಾಂಧಿಯವರು ನಿರ್ಧಾರ ಪ್ರಕಟಿಸಬಹುದು. ಆದರೆ ಮತ್ತೆ ಕಾಂಗ್ರೆಸ್ ಜತೆ ಮೈತ್ರಿ ಮಾಡಲು ದೇವೇಗೌಡರಿಗೆ ಒಲವಿದೆ ಎಂದು ಅವರು ಹೇಳಿದ ಮಾತಿನಲ್ಲಿ ತಿಳಿಯುತ್ತದೆ . ಹಾಗೂ ಮತ್ತೆ ಮೈತ್ರಿ ಸರ್ಕಾರ ಮುಂದುವರೆದರೆ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಕೂಡ ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇದೆ .