ಮೈಸೂರು ಗ್ಯಾಂಗ್ ರೇಪ್ ಪ್ರಕರಣ; ಪೊಲೀಸರಿಗೆ ನಗದು ಬಹುಮಾನ

Date:

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಪ್ರವೀಣ್​ ಸೂದ್ ಶನಿವಾರ ಸುದ್ದಿಗೋಷ್ಠಿ ನಡೆಸಿದರು.

ಬಂಧಿತ ಆರೋಪಿಗಳು ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ ಯುವತಿಯನ್ನು ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಸಂತ್ರಸ್ತ ವಿದ್ಯಾರ್ಥಿನಿಯನ್ನು ಹೆದರಿಸಿ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ದರೋಡೆಗೆ ಪ್ರಯತ್ನಿಸಿ ನಂತರ ಅತ್ಯಾಚಾರ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದು, ಕಾರ್ಮಿಕರಾಗಿರುವ ಇವರು ತಮಿಳುನಾಡಿನ ಮೂಲದವರು,” ಎಂದು ಮಾಹಿತಿ ನೀಡಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ಒಬ್ಬ ಬಾಲಾಪರಾಧಿ ಇರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಆದರೆ, ಅದು ಹೆಚ್ಚಿನ ತನಿಖೆಯಿಂದಲೇ ಗೊತ್ತಾಗಬೇಕು,” ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ 5 ಜನರನ್ನು ಬಂಧಿಸಲಾಗಿದೆ. ಎಲ್ಲರೂ ತಿರುಪುರ ಮೂಲದವರು. ಆಗಾಗ ಮೈಸೂರು ನಗರಕ್ಕೆ ಬರುತ್ತಿದ್ದರು. 7 ಹಾಗೂ 8 ತರಗತಿ ಓದಿದ ಇವರೆಲ್ಲರೂ ಕಾರ್ಮಿಕರಾಗಿದ್ದಾರೆ. ಡ್ರೈವರ್​, ಕಾರ್ಪೆಂಟರ್​ ಸೇರಿದಂತೆ ಬೇರೆ ಬೇರೆ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ ಒಬ್ಬ ಬಾಲಕ 17 ವರ್ಷದವನಿದ್ದಾನೆ ಎನ್ನುವುದು ಪ್ರಾಥಮಿಕ ಮಾಹಿತಿಯಲ್ಲಿ ಲಭ್ಯವಾಗಿದೆ. ಆದರೆ, ಅದು ಇನ್ನೂ ಖಚಿತವಾಗಬೇಕಿದೆ,” ಎಂದು ಅವರು ಹೇಳಿದರು.

“ಅತ್ಯಾಚಾರ ಪ್ರಕರಣದಲ್ಲಿ ಓರ್ವ ಬಾಲಾಪರಾಧಿ ಇದ್ದರೂ, ಈ ಹಿಂದಿನ ಪ್ರಕರಣಗಳಂತೆ ಇದು ಆಗುವುದಿಲ್ಲ. ಏಕೆಂದರೆ, ಬಾಲಕಾಯ್ದೆಯೂ ಬದಲಾಗಿದೆ. ಗಂಭೀರ ಪ್ರಕರಣದಲ್ಲಿ 16 ವರ್ಷ ಆಗಿದ್ದರೆ ನ್ಯಾಯಾಲಯದಲ್ಲಿ ವಿಚಾರಣೆ,” ಆಗಲಿದೆ ಎಂದರು.

6 ಆರೋಪಿಗಳ ಪೈಕಿ ಓರ್ವ ತಲೆಮರೆಸಿಕೊಂಡಿದ್ದು, ಇವರೆಲ್ಲರೂ ಕೆಲಸಕ್ಕೆಂದು ಮೈಸೂರಿಗೆ ಬಂದಿದ್ದು, ವಾಪಸ್ಸು ಹೋಗುವಾಗ ಕುಡಿದು ಪಾರ್ಟಿ ಮಾಡುತ್ತಿದ್ದರು ಎಂದು ಗೊತ್ತಾಗಿದೆ.”

“ಇದುವರೆಗೂ ನಮಗೆ ಅತ್ಯಾಚಾರ ಸಂತ್ರಸ್ಥೆಯಿಂದ ಒಂದೂ ಮಾಹಿತಿ ಸಿಕ್ಕಿಲ್ಲ. ಸಂತ್ರಸ್ತೆಯ ಸ್ನೇಹಿತನಿಂದ ಸ್ವಲ್ಪ ಮಾಹಿತಿ ಸಿಕ್ಕಿತು. ಅದರ ಆಧಾರದ ಮೇಲೆ ಐದು ಶಂಕಿತ ಆರೋಪಿಗ ಬಂಧನವಾಗಿದೆ. ಹೈಕೋರ್ಟ್ ಆದೇಶದಂತೆ ಜಾಸ್ತಿ ಮಾಹಿತಿ ನೀಡಲಾಗಲ್ಲ,” ಎಂದು ಹೇಳಿದರು.

 

ಆರೋಪಿಗಳನ್ನು ಬಂಧಿಸಿದ ಇಡೀ ಪೊಲೀಸ್ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ವೈಜ್ಞಾನಿಕ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳ ಬಂಧನವಾಗಿದೆ. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಶ್ಲಾಘಿಸುವೆ. ಪ್ರಕರಣ ಭೇದಿಸಿದ ಪೊಲೀಸರಿಗೆ 5 ಲಕ್ಷ ರೂ. ಬಹುಮಾನ ಘೋಷಿಸುತ್ತೇವೆ,” ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...