No menu items!
12.4 C
Munich
Wednesday, April 29, 2026

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಹಿಂದಿನ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ

Must read

ಮೈಸೂರು ಗ್ಯಾಂಗ್‌ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ನಿನ್ನೆಯಿಂದ ಕಾಂಗ್ರೆಸ್-ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧದ ಹೇಳಿಕೆಯನ್ನು ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ ಕೃತ್ಯ ನಡೆಯಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ ರಾಮನಗರದ ಚನ್ನಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದರು.

“ಇದರಲ್ಲಿ ಮೊದಲು ಸರ್ಕಾರದ ವೈಫಲ್ಯವಿದೆ. ಪೊಲೀಸ್ ಇಲಾಖೆ ಅಮಾಯಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಸಾರ್ವಜನಿಕವಾಗಿ ಮದ್ಯಪಾನಕ್ಕೆ ಅವಕಾಶ ಕೊಟ್ಟಿದ್ದೇ ತಪ್ಪು. ಪೊಲೀಸ್ ಇಲಾಖೆಯಲ್ಲಿ ಅಸಮರ್ಥತೆ ಎದ್ದು ಕಾಣಿಸುತ್ತಿದೆ” ಎಂದರು. “ಪೊಲೀಸ್ ಅಧಿಕಾರಿಗಳನ್ನು ಹಣ ಪಡೆದು ವರ್ಗಾವಣೆ ಮಾಡುವುದನ್ನು ನಿಲ್ಲಿಸುವವರೆಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುತ್ತದೆ. ನನಗೆ ಈ ಸಂಬಂಧ ಹಲವು ಮಾಹಿತಿಗಳು ಇವೆ ಎಲ್ಲವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ, ಸರಕಾರ ಮೊದಲು ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

 

“ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಗಳು ನಡೆಯುತ್ತಿವೆ. ಸರ್ಕಾರ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು. ಉತ್ತರ ಪ್ರದೇಶ, ದೆಹಲಿಯಂತಾ ಕಡೆಗಳಲ್ಲಿ ನಡೆದ ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ” ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article