ಮೈಸೂರು ದಸರಾ ಕಂಬಳಕ್ಕೆ ಚಾಲನೆ; ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಬಗ್ಗೆ ಪ್ರಶ್ನೆ!

Must read

ಮೈಸೂರು ದಸರಾ ಕಂಬಳಕ್ಕೆ ಚಾಲನೆ; ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಬಗ್ಗೆ ಪ್ರಶ್ನೆ!

 

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ವಿಶೇಷ ಆಕರ್ಷಣೆಯಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳ ಆಯೋಜನೆಯಾಗುತ್ತಿದೆ. ಮೈಸೂರು ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಎರಡು ದಿನಗಳ ಕಾಲ ನಡೆಯಲಿದೆ. ಆದರೆ, ಕಂಬಳ ಆಯೋಜನೆಯ ವೇಳೆ ಪ್ರಾಣಿಗಳ ಕಲ್ಯಾಣಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಲಾಗಿದೆಯೇ ಎಂಬ ಪ್ರಶ್ನೆಗಳು ಇದೀಗ ಎದ್ದಿವೆ.

ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳ ಪ್ರಕಾರ, ಕಂಬಳದಲ್ಲಿ ಭಾಗವಹಿಸುವ ಕೋಣಗಳಿಗೆ ಯಾವುದೇ ರೀತಿಯ ಹಿಂಸೆ ಅಥವಾ ನೋವು ಉಂಟುಮಾಡುವಂತಿಲ್ಲ. ಚಾಟಿ ಏಟು ನೀಡುವುದು ಸೇರಿದಂತೆ ಪ್ರಾಣಿಗಳಿಗೆ ಹಾನಿಯಾಗುವ ಯಾವುದೇ ಕ್ರಮಗಳಿಗೆ ಅವಕಾಶವಿಲ್ಲ. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಆಯೋಜಕರ ಜವಾಬ್ದಾರಿಯಾಗಿದೆ.

ಪ್ರಾಣಿಗಳ ಸುರಕ್ಷತೆ ಅಧಿಕಾರಿಗಳ ಹೊಣೆ!

ಕಂಬಳ ಆಯೋಜನೆಯ ಸಂದರ್ಭದಲ್ಲಿ ಪ್ರಾಣಿಗಳ ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ವಹಿಸಲಾಗಿದೆ. ಕಂಬಳ ನಡೆಯುವ ಸ್ಥಳವನ್ನು ಪರಿಶೀಲಿಸಲು ಪ್ರಾಣಿ ಕಲ್ಯಾಣ ಮಂಡಳಿಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ನಿರ್ದೇಶನವೂ ಇದೆ.

ಇದಲ್ಲದೆ, ಕಂಬಳ ಆಯೋಜನೆಗೆ ಏಳು ದಿನಗಳ ಮುಂಚಿತವಾಗಿ ಅಗತ್ಯ ಅಧಿಸೂಚನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಎಲ್ಲ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಎಂಬ ಬಗ್ಗೆ ಇದೀಗ ಅನುಮಾನಗಳು ವ್ಯಕ್ತವಾಗಿವೆ.

ದಸರಾ ಕಂಬಳಕ್ಕೆ ಆಕ್ಷೇಪ; ಪತ್ರ ಬರೆದ ಸ್ನೇಹಮಯಿ ಕೃಷ್ಣ!

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳವನ್ನು ಆಯೋಜಿಸುವ ನಿರ್ಧಾರ ಪ್ರಕಟವಾದಾಗಿನಿಂದಲೇ ಪರ-ವಿರೋಧದ ಚರ್ಚೆಗಳು ನಡೆದಿದ್ದವು. ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ಅಗತ್ಯವೇನಿದೆ ಎಂಬ ಪ್ರಶ್ನೆಗಳೂ ಕೇಳಿಬಂದಿದ್ದವು.

ಈ ನಡುವೆ, ಸ್ನೇಹಮಯಿ ಕೃಷ್ಣ ಅವರು ಕಂಬಳ ಆಯೋಜನೆಯ ಕುರಿತು ಸ್ಪಷ್ಟನೆ ಕೋರಿ ಡಿವೈಎಸ್ಪಿಗೆ ಪತ್ರ ಬರೆದಿದ್ದಾರೆ. ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳನ್ನು ಪಾಲಿಸಲಾಗಿದೆಯೇ ಮತ್ತು ಪ್ರಾಣಿಗಳಿಗೆ ಯಾವುದೇ ರೀತಿಯ ಹಿಂಸೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆಯೇ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.

ನಿಯಮ ಪಾಲನೆಯಾಗಿದೆಯೇ ಎಂಬುದೇ ಈಗ ಕುತೂಹಲ!

ಒಂದೆಡೆ ಮೈಸೂರು ದಸರಾಕ್ಕೆ ಕರಾವಳಿಯ ಕಂಬಳ ಹೊಸ ಆಕರ್ಷಣೆ ಸೇರ್ಪಡೆಯಾಗಿದ್ದರೆ, ಮತ್ತೊಂದೆಡೆ ಪ್ರಾಣಿಗಳ ಸುರಕ್ಷತೆ ಮತ್ತು ನ್ಯಾಯಾಲಯದ ಮಾರ್ಗಸೂಚಿಗಳ ಪಾಲನೆ ಕುರಿತು ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿಯ ಸ್ಪಷ್ಟನೆ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

- Advertisement -spot_img

More articles

- Advertisement -spot_img

Latest article